ಆಡಲು ಪೋಗೊಣು ಬಾರೊ ರಂಗ
ರಚನೆಕಾರ: ಶ್ರೀಪಾದರಾಜರು
ವರ್ಗ: ಶ್ರೀಕೃಷ್ಣ
ಆಡಲು ಪೋಗೊಣು ಬಾರೊ ರಂಗ
ಕೂಡಿ ಯಮುನಾ ತೀರದಲ್ಲಿ || ಪ ||
ಚಿಣ್ಣಿಕೋಲು ಚೆಂಡು ಬುಗರಿ
ಸಣ್ಣ ಸಣ್ಣ ಆಟಗಳನು
ಕಣ್ಣಮುಚ್ಚಲಿಕೆ ಕುಂಟಲಿಪಿ
ಬಣ್ಣ ಬಣ್ಣದ ಆಟಗಳನು || ೧ ||
ಜಾಹ್ನವಿಯ ತೀರವಂತೆ
ಜನಕರಾಜನ ಕುವರಿಯಂತೆ
ಜಾನಕಿಯ ವಿವಾಹವಂತೆ
ಜಾಣ ನೀನು ಬರಬೇಕಂತೆ || ೨ ||
ಪುಂಡರೀಯ ನಗರವಂತೆ
ಭೀಷ್ಮಕರಾಜನ ಕುವರಿಯಂತೆ
ಶಿಶುಪಾಲನ್ನ ಒಲ್ಲಳಂತೆ
ನಿಮಗೆ ಓಲೆ ಬರೆದಳಂತೆ || ೩ ||
ಕೌರವರು ಪಾಂಡವರು
ಲೆತ್ತವಾಡಿ ಸೋತರಂತೆ
ರಾಜ್ಯವನ್ನು ಬಿಟ್ಟರಂತೆ
ರಂಗವಿಠಲ ಬರಬೇಕಂತೆ || ೪ ||
ಕೂಡಿ ಯಮುನಾ ತೀರದಲ್ಲಿ || ಪ ||
ಚಿಣ್ಣಿಕೋಲು ಚೆಂಡು ಬುಗರಿ
ಸಣ್ಣ ಸಣ್ಣ ಆಟಗಳನು
ಕಣ್ಣಮುಚ್ಚಲಿಕೆ ಕುಂಟಲಿಪಿ
ಬಣ್ಣ ಬಣ್ಣದ ಆಟಗಳನು || ೧ ||
ಜಾಹ್ನವಿಯ ತೀರವಂತೆ
ಜನಕರಾಜನ ಕುವರಿಯಂತೆ
ಜಾನಕಿಯ ವಿವಾಹವಂತೆ
ಜಾಣ ನೀನು ಬರಬೇಕಂತೆ || ೨ ||
ಪುಂಡರೀಯ ನಗರವಂತೆ
ಭೀಷ್ಮಕರಾಜನ ಕುವರಿಯಂತೆ
ಶಿಶುಪಾಲನ್ನ ಒಲ್ಲಳಂತೆ
ನಿಮಗೆ ಓಲೆ ಬರೆದಳಂತೆ || ೩ ||
ಕೌರವರು ಪಾಂಡವರು
ಲೆತ್ತವಾಡಿ ಸೋತರಂತೆ
ರಾಜ್ಯವನ್ನು ಬಿಟ್ಟರಂತೆ
ರಂಗವಿಠಲ ಬರಬೇಕಂತೆ || ೪ ||