ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ
ರಚನೆಕಾರ: ಕನಕದಾಸರು
ವರ್ಗ: ಉಪದೇಶಾತ್ಮಕ
ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ
ಬಹುಜನರು ನೆಲೆ ತಿಳಿದು ಪೇಳಿ ಮತ್ತಿದನು || ಪ ||
ದೇವರಿಲ್ಲದ ಗುಡಿಯು ಪಾಳು ಬಿದ್ದ ಅಂಗಡಿಯು
ಭಾವವಿಲ್ಲದ ಭಕುತಿ ಅದು ಕುಹಕ ಯುಕುತಿ
ಹೇವವಿಲ್ಲದ ಹೆಣ್ಣು ಗಜ್ಜುಗ ಬೆಳೆದಾ ಕಣ್ಣು
ಸೇವೆಯರಿಯದ ಧಣಿಯು ಕಲ್ಲಿನಾ ಖಣಿಯು || ೧ ||
ಧರ್ಮವಿಲ್ಲದ ಅರಸು ಮುರಿದ ಕಾಲಿನ ಗೊರಸು
ನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸು
ಕರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡು
ಮರ್ಮವಿಲ್ಲದ ಮಾತು ಒಡಕು ಮಡಕೆಯ ತೂತು || ೨ ||
ಮಕ್ಕಳಿಲ್ಲದ ಸಿರಿಯು ಕೊಳೆತ ತೆಂಗಿನ ಕಾಯಿ
ಸೌಖ್ಯವಿಲ್ಲದ ಕೂಟ ಅದು ಕಾಳಕೂಟ
ಒಕ್ಕಲಿಲ್ಲದ ಊರು ಕೊಳೆತು ನಾರುವ ನೀರು
ಸೊಕ್ಕಿ ನಡೆಯುವ ಭೃತ್ಯ ಅವ ಕ್ರೂರಕೃತ್ಯ || ೩ ||
ಕಂಡು ಕರೆಯದ ನೆಂಟ ಗಂಡುಗತ್ತೆಯ ಶಂಟ
ಉಂಡು ನಗದಿಹ ಮೋರೆ ಅದು ಕಹಿಯ ಸೋರೆ
ದಂಡಿಗಂಜುವ ಬಂಟ ಒಡಕು ಹರವಿಯ ಕಂಠ
ಗಂಡಗಂಜದ ನಾರಿ ಅವಳೆ ಹೆಮ್ಮಾರಿ || ೪ ||
ಬಿಟ್ಟು ನಡೆಯುವ ಗೆಳೆಯ ಹರಕು ತೊಗಲಿನ ಮಿಣಿಯು
ಕೊಟ್ಟು ಕೇಳುವ ದಾತ ಅವ ಹೀನಜಾತ
ಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿ
ಮುಟ್ಟಿ ಭಜಿಸದ ನರನು ಅವನು ಕಾಡುಮರನು || ೫ ||
ಬಹುಜನರು ನೆಲೆ ತಿಳಿದು ಪೇಳಿ ಮತ್ತಿದನು || ಪ ||
ದೇವರಿಲ್ಲದ ಗುಡಿಯು ಪಾಳು ಬಿದ್ದ ಅಂಗಡಿಯು
ಭಾವವಿಲ್ಲದ ಭಕುತಿ ಅದು ಕುಹಕ ಯುಕುತಿ
ಹೇವವಿಲ್ಲದ ಹೆಣ್ಣು ಗಜ್ಜುಗ ಬೆಳೆದಾ ಕಣ್ಣು
ಸೇವೆಯರಿಯದ ಧಣಿಯು ಕಲ್ಲಿನಾ ಖಣಿಯು || ೧ ||
ಧರ್ಮವಿಲ್ಲದ ಅರಸು ಮುರಿದ ಕಾಲಿನ ಗೊರಸು
ನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸು
ಕರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡು
ಮರ್ಮವಿಲ್ಲದ ಮಾತು ಒಡಕು ಮಡಕೆಯ ತೂತು || ೨ ||
ಮಕ್ಕಳಿಲ್ಲದ ಸಿರಿಯು ಕೊಳೆತ ತೆಂಗಿನ ಕಾಯಿ
ಸೌಖ್ಯವಿಲ್ಲದ ಕೂಟ ಅದು ಕಾಳಕೂಟ
ಒಕ್ಕಲಿಲ್ಲದ ಊರು ಕೊಳೆತು ನಾರುವ ನೀರು
ಸೊಕ್ಕಿ ನಡೆಯುವ ಭೃತ್ಯ ಅವ ಕ್ರೂರಕೃತ್ಯ || ೩ ||
ಕಂಡು ಕರೆಯದ ನೆಂಟ ಗಂಡುಗತ್ತೆಯ ಶಂಟ
ಉಂಡು ನಗದಿಹ ಮೋರೆ ಅದು ಕಹಿಯ ಸೋರೆ
ದಂಡಿಗಂಜುವ ಬಂಟ ಒಡಕು ಹರವಿಯ ಕಂಠ
ಗಂಡಗಂಜದ ನಾರಿ ಅವಳೆ ಹೆಮ್ಮಾರಿ || ೪ ||
ಬಿಟ್ಟು ನಡೆಯುವ ಗೆಳೆಯ ಹರಕು ತೊಗಲಿನ ಮಿಣಿಯು
ಕೊಟ್ಟು ಕೇಳುವ ದಾತ ಅವ ಹೀನಜಾತ
ಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿ
ಮುಟ್ಟಿ ಭಜಿಸದ ನರನು ಅವನು ಕಾಡುಮರನು || ೫ ||