ಅರಿತು ನಡೆಯಲು ಬೇಕು
ರಚನೆಕಾರ: ಕನಕದಾಸರು
ವರ್ಗ: ಉಪದೇಶಾತ್ಮಕ
ಅರಿತು ನಡೆಯಲು ಬೇಕು ನರಕಾಯವೆತ್ತಿದ ಮೇಲೆ
ಅರಿಯದಿದ್ದರೆ ನರಕವೇ ಪ್ರಾಪ್ತಿ || ಪ ||
ದುರ್ಜನರ ಮನೆಯ ಪಾಯಸಾನ್ನಕಿಂತ
ಸಜ್ಜನರ ಮನೆಯ ರಬ್ಬಳಿಗೆ ಲೇಸು
ಹೆಜ್ಜೆಗೆ ಸಾವಿರಾರು ಹೊನ್ನನಿತ್ತರೂ ಬೇಡ ಬಲು
ದುರ್ಜನರ ಸಂಗ ಬಲು ಭಂಗ ಹರಿಯೆ || ೧ ||
ಭಕ್ತಿಹೀನರ ಮನೆಯ ಪಟ್ಟ ಸುಪ್ಪತಿಗೆಗಿಂತ
ಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸು
ಮುಕ್ತಿ ಮಾರ್ಗವ ತೋರ್ಪ ಮುರಹರಣ ದಾಸರನು
ಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ || ೨ ||
ಆಶೆಕಾರರ ಮನೆಯ ವಿಳಾಸ ಸುಖಕಿಂತ
ಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸು
ಭೂಸುರಪ್ರಿಯ ಕಾಗಿನೆಲೆಯಾದಿಕೇಶವನ
ಮೀಸಲಿನ ಪಾದಭಜನೆ ಕಡುಲೇಸು ಮನವೆ || ೩ ||
ಅರಿಯದಿದ್ದರೆ ನರಕವೇ ಪ್ರಾಪ್ತಿ || ಪ ||
ದುರ್ಜನರ ಮನೆಯ ಪಾಯಸಾನ್ನಕಿಂತ
ಸಜ್ಜನರ ಮನೆಯ ರಬ್ಬಳಿಗೆ ಲೇಸು
ಹೆಜ್ಜೆಗೆ ಸಾವಿರಾರು ಹೊನ್ನನಿತ್ತರೂ ಬೇಡ ಬಲು
ದುರ್ಜನರ ಸಂಗ ಬಲು ಭಂಗ ಹರಿಯೆ || ೧ ||
ಭಕ್ತಿಹೀನರ ಮನೆಯ ಪಟ್ಟ ಸುಪ್ಪತಿಗೆಗಿಂತ
ಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸು
ಮುಕ್ತಿ ಮಾರ್ಗವ ತೋರ್ಪ ಮುರಹರಣ ದಾಸರನು
ಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ || ೨ ||
ಆಶೆಕಾರರ ಮನೆಯ ವಿಳಾಸ ಸುಖಕಿಂತ
ಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸು
ಭೂಸುರಪ್ರಿಯ ಕಾಗಿನೆಲೆಯಾದಿಕೇಶವನ
ಮೀಸಲಿನ ಪಾದಭಜನೆ ಕಡುಲೇಸು ಮನವೆ || ೩ ||