ಬಾಗಿಲನು ತೆರೆದು

ರಚನೆಕಾರ: ಕನಕದಾಸರು

ವರ್ಗ: ನರಸಿಂಹ

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ || ಪ ||
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ || ಅ.ಪ ||

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರಿಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೇ || ೧ ||

ಕಡುಕೋಪದಿಂ ಖಳನು ಖಡುಗ ಕೈಯಲಿ ಪಿಡಿದು
ನಿನ್ನೊಡೆಯನೆಲ್ಲಿಹನೆಂದು ಕಂಬವನು ಜಡಿಯೆ
ದೃಢಭಕುತಿಯಿಂ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಸ್ತಂಭದಿಂದೊಡೆದೆ ನರಹರಿಯೆ || ೨ ||

ಯಮಸುತನ ರಾಣಿಗಕ್ಷಯವಸನವನಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ || ೩ ||