ಬಂಟನಾಗಿ ಬಾಗಿಲ ಕಾಯುವೆ
ರಚನೆಕಾರ: ಕನಕದಾಸರು
ವರ್ಗ: ವಿಷ್ಣು
ಬಂಟನಾಗಿ ಬಾಗಿಲ ಕಾಯುವೆ, ಶ್ರೀಹರಿಯ || ಪ ||
ವೈಕುಂಠದ ಶ್ರೀಹರಿಯ ದಾಸರ ಮನೆಯ || ಅ.ಪ ||
ಹೊರಸುತ್ತು ಪ್ರಾಕಾರ ಸುತ್ತಿ ನಾ ಬರುವೆ
ಬರುವ ಹೋಗುವರ ವಿಚಾರಿಸಿ ಬಿಡುವೆ
ಕರದಿ ಕಂಬಿಯ ಪೊತ್ತು ಅಲ್ಲಿ ನಿಂದಿರುವೆ
ಶ್ರೀಹರಿಯ ಸಮುದ ಓಲಗದೊಳಿರುವೆ || ೧ ||
ತೊತ್ತು ತೊಂಡನಾಗಿ ಬಾಗಿಲ ಕಾಯ್ವೆ
ಚಿತ್ರದ ಚಾವಡಿ ರಜವನು ಬಳಿವೆ
ಮುತ್ತಿನ ರಂಗವಲ್ಲಿಯನಿಟ್ಟು ಬರೆವೆ
ರತ್ನಗಂಬಳಿ ಹೊತ್ತು ಹಾಸುವೆನು || ೨ ||
ವೇಳವೇಳೆಗೆ ನಾನೂಳಿಗವ ಮಾಡುವೆ
ಆಲವಟ್ಟಿಗೆ ಚಾಮರವ ಬೀಸುವೆ
ತಾಳದಂಡಿಗೆ ಭೃಂಗಿ ಮೇಳಗಳ ಕೂಡಿ
ಶ್ರೀಲೋಲನ ಕೊಂಡಾಡಿ ಪಾಡುವೆನು || ೩ ||
ಎಂಜಲ ಹರಿವಾಣಂಗಳ ಬೆಳಗುವೆ
ಕಂಜನಾಭನ ಪಾದಕಮಲವ ತೊಳೆವೆ
ರಂಜಿಪ ಕುಸುಮದ ಮಾಲೆ ತಂದಿಡುವೆ
ಸಂಜೆಗೆ ಪಂಜಿನ ದಾಸನಾಗಿರುವೆ || ೪ ||
ಮೀಸಲೂಳಿಗವ ನಾ ಮಾಡಿಕೊಂಡಿರುವೆ
ಶೇಷ ಪ್ರಸಾದವ ಉಂಡುಕೊಂಡಿರುವೆ
ಶೇಷಗಿರಿ ಕಾಗಿನೆಲೆಯಾದಿಕೇಶವನ
ದಾಸರ ದಾಸರ ದಾಸರ ಮನೆಯ || ೫ ||
ವೈಕುಂಠದ ಶ್ರೀಹರಿಯ ದಾಸರ ಮನೆಯ || ಅ.ಪ ||
ಹೊರಸುತ್ತು ಪ್ರಾಕಾರ ಸುತ್ತಿ ನಾ ಬರುವೆ
ಬರುವ ಹೋಗುವರ ವಿಚಾರಿಸಿ ಬಿಡುವೆ
ಕರದಿ ಕಂಬಿಯ ಪೊತ್ತು ಅಲ್ಲಿ ನಿಂದಿರುವೆ
ಶ್ರೀಹರಿಯ ಸಮುದ ಓಲಗದೊಳಿರುವೆ || ೧ ||
ತೊತ್ತು ತೊಂಡನಾಗಿ ಬಾಗಿಲ ಕಾಯ್ವೆ
ಚಿತ್ರದ ಚಾವಡಿ ರಜವನು ಬಳಿವೆ
ಮುತ್ತಿನ ರಂಗವಲ್ಲಿಯನಿಟ್ಟು ಬರೆವೆ
ರತ್ನಗಂಬಳಿ ಹೊತ್ತು ಹಾಸುವೆನು || ೨ ||
ವೇಳವೇಳೆಗೆ ನಾನೂಳಿಗವ ಮಾಡುವೆ
ಆಲವಟ್ಟಿಗೆ ಚಾಮರವ ಬೀಸುವೆ
ತಾಳದಂಡಿಗೆ ಭೃಂಗಿ ಮೇಳಗಳ ಕೂಡಿ
ಶ್ರೀಲೋಲನ ಕೊಂಡಾಡಿ ಪಾಡುವೆನು || ೩ ||
ಎಂಜಲ ಹರಿವಾಣಂಗಳ ಬೆಳಗುವೆ
ಕಂಜನಾಭನ ಪಾದಕಮಲವ ತೊಳೆವೆ
ರಂಜಿಪ ಕುಸುಮದ ಮಾಲೆ ತಂದಿಡುವೆ
ಸಂಜೆಗೆ ಪಂಜಿನ ದಾಸನಾಗಿರುವೆ || ೪ ||
ಮೀಸಲೂಳಿಗವ ನಾ ಮಾಡಿಕೊಂಡಿರುವೆ
ಶೇಷ ಪ್ರಸಾದವ ಉಂಡುಕೊಂಡಿರುವೆ
ಶೇಷಗಿರಿ ಕಾಗಿನೆಲೆಯಾದಿಕೇಶವನ
ದಾಸರ ದಾಸರ ದಾಸರ ಮನೆಯ || ೫ ||