ಬಾರೋ ನಮ್ಮ ಮನೆಗೆ ಗೋಪಾಲಕೃಷ್ಣ
ರಚನೆಕಾರ: ಶ್ರೀಪಾದರಾಜರು
ವರ್ಗ: ಶ್ರೀಕೃಷ್ಣ
ಬಾರೋ ನಮ್ಮ ಮನೆಗೆ ಗೋಪಾಲಕೃಷ್ಣ || ಪ ||
ಗೊಲ್ಲ ಬಾಲಕರನು ನಿಲ್ಲಿಸಿ ಹೆಗಲೇರಿ
ಗುಲ್ಲು ಮಾಡದೆ ಮೊಸರೆಲ್ಲ ಸವಿದ ಕೃಷ್ಣ || ೧ ||
ಕಸ್ತೂರಿ ತಿಲಕವ ಶಿಸ್ತಾಗಿ ಫಣೆಯಲಿಟ್ಟು
ಮಸ್ತಾಗಿ ಕುಣಿವ ಪರವಸ್ತು ಕಾಣೇನೆಂದು || ೨ ||
ಮುಜ್ಜಗವನೆಲ್ಲ ಬೊಜ್ಜೆಯೊಳಗೆಯಿಟ್ಟು
ಗೆಜ್ಜೆಯ ಕಟ್ಟಿ ತಪ್ಪು ಹೆಜ್ಜೆಯನಿಕ್ಕುತ || ೩ ||
ನಾರಿಯರು ಬಿಚ್ಚಿಟ್ಟ ಸೀರೆಗಳನೊಯ್ದು
ಮೇರೆಯಿಲ್ಲದೆ ಕೈಯ ತೋರೆಂದ ಶ್ರೀ ಕೃಷ್ಣ || ೪ ||
ಅಂಗನೆಯರ ವ್ರತ ಭಂಗವ ಮಾಡಿದ
ರಂಗವಿಠಲ ಭವಭಂಗ ಪರಿಹರಿಸೋ || ೫ ||