ಬೇಡ ಬೇಡ ಎಲೆಲೆ ದುರಿತಗಳಿರಾ
ರಚನೆಕಾರ: ಕನಕದಾಸರು
ವರ್ಗ: ಉಪದೇಶಾತ್ಮಕ
ಬೇಡ ಬೇಡ ಎಲೆಲೆ ದುರಿತಗಳಿರಾ ನಮ್ಮ
ಬಾಡದಾಧಿಪನ ಕಿಂಕರನ ಕೂಡ ತೊಡರು || ಪ ||
ವಾರಿಕಲ್ಲಾನೆ ವಜ್ರದ ಮೃಗೇಂದ್ರನ ಕೂಡ
ಹೋರಿ ಹೊದುಕುಳಿಗೊಂಡು ಗೆಲಬಲ್ಲುದೆ?
ಭೂರಿ ಭೂತಗಳೆ ಭೂಸತಿಯ ಕಾಂತನ ನಾಮ
ಧಾರಿಗಳ ತೊಡರು ನಿಮಗಳವಡದು ನಾನರಿವೆ || ೧ ||
ಮೇಣದಹಿ ಕೋಟಿ ದಳ್ಳುರಿಯ ಗರುಡನ ಕೂಡ
ಪ್ರಾಣದಿಂ ಕಾದಿ ಜಯಿಸುವುದೆ ಹೇಳಾ?
ಕ್ಷೋಣಿಯೊಳು ಕ್ಷೀಣದೈವ ಬ್ರಹ್ಮಾಂಡ ಕೋಟಿಗಳು
ದಾನವಾರಿಯ ದಾಸಗಳವಡವು ನಾನರಿವೆ || ೨ ||
ಹುಲಿಯ ಮೀಸೆಯ ಪಾಶವಿಡಿದು ಗೋವತ್ಸಗಳು
ನಲಿದು ಉಯ್ಯಾಲೆಯನಾಡುವವೆ ಹೇಳಾ?
ಕಲಿ ಬಾಡದಾದಿಕೇಶವರಾಯ ಚಕ್ರದಲಿ
ತಲೆಗಳನು ಚೆಂಡಾಡಿಸುವ ಕಾಣೊ ಬೇಡ || ೩ ||
ಬಾಡದಾಧಿಪನ ಕಿಂಕರನ ಕೂಡ ತೊಡರು || ಪ ||
ವಾರಿಕಲ್ಲಾನೆ ವಜ್ರದ ಮೃಗೇಂದ್ರನ ಕೂಡ
ಹೋರಿ ಹೊದುಕುಳಿಗೊಂಡು ಗೆಲಬಲ್ಲುದೆ?
ಭೂರಿ ಭೂತಗಳೆ ಭೂಸತಿಯ ಕಾಂತನ ನಾಮ
ಧಾರಿಗಳ ತೊಡರು ನಿಮಗಳವಡದು ನಾನರಿವೆ || ೧ ||
ಮೇಣದಹಿ ಕೋಟಿ ದಳ್ಳುರಿಯ ಗರುಡನ ಕೂಡ
ಪ್ರಾಣದಿಂ ಕಾದಿ ಜಯಿಸುವುದೆ ಹೇಳಾ?
ಕ್ಷೋಣಿಯೊಳು ಕ್ಷೀಣದೈವ ಬ್ರಹ್ಮಾಂಡ ಕೋಟಿಗಳು
ದಾನವಾರಿಯ ದಾಸಗಳವಡವು ನಾನರಿವೆ || ೨ ||
ಹುಲಿಯ ಮೀಸೆಯ ಪಾಶವಿಡಿದು ಗೋವತ್ಸಗಳು
ನಲಿದು ಉಯ್ಯಾಲೆಯನಾಡುವವೆ ಹೇಳಾ?
ಕಲಿ ಬಾಡದಾದಿಕೇಶವರಾಯ ಚಕ್ರದಲಿ
ತಲೆಗಳನು ಚೆಂಡಾಡಿಸುವ ಕಾಣೊ ಬೇಡ || ೩ ||