ದಾಸನ ಮಾಡಿಕೊ ಎನ್ನ
ರಚನೆಕಾರ: ಪುರಂದರದಾಸರು
ವರ್ಗ: ಶ್ರೀನಿವಾಸ
ದಾಸನ ಮಾಡಿಕೊ ಎನ್ನ
ಸ್ವಾಮಿ ಸಾಸಿರನಾಮದ ವೆಂಕಟರಮಣ || ಪ ||
ದುರುಬುದ್ಧಿಗಳನೆಲ್ಲ ಬಿಡಿಸೊ
ನಿನ್ನ ಕರುಣಕವಚವೆನ್ನ ಹರಣಕ್ಕೆ ತೊಡಿಸೊ
ಚರಣಸೇವೆ ಎನಗೆ ಕೊಡಿಸೊ ಅಭಯ
ಕರಪುಷ್ಪವ ಎನ್ನ ಶಿರದಲ್ಲಿ ಮುಡಿಸೊ || ೧ ||
ದೃಢಭಕ್ತಿ ನಿನ್ನಲ್ಲಿ ಬೇಡಿ
ನಾ ಅಡಿಗೆರಗುವೆನಯ್ಯ ಅನುದಿನ ಪಾಡಿ
ಕಡೆಗಣ್ಣಲೇ ಎನ್ನ ನೋಡಿ ಬಿಡುವೆ
ಕೊಡು ನಿನ್ನ ಧ್ಯಾನವ ಮನಶುಚಿ ಮಾಡಿ || ೨ ||
ಮೊರೆಹೊಕ್ಕವರ ಕಾಯ್ವ ಬಿರುದು
ಎನ್ನ ಮರೆಯದೆ ರಕ್ಷಣೆ ಮಾಡಯ್ಯ ಪೊರೆದು
ದುರಿತಗಳೆಲ್ಲವ ತರಿದು
ಸಿರಿ ಪುರಂದರವಿಠ್ಠಲ ಎನ್ನನು ಪೊರೆದು || ೩ ||
ಸ್ವಾಮಿ ಸಾಸಿರನಾಮದ ವೆಂಕಟರಮಣ || ಪ ||
ದುರುಬುದ್ಧಿಗಳನೆಲ್ಲ ಬಿಡಿಸೊ
ನಿನ್ನ ಕರುಣಕವಚವೆನ್ನ ಹರಣಕ್ಕೆ ತೊಡಿಸೊ
ಚರಣಸೇವೆ ಎನಗೆ ಕೊಡಿಸೊ ಅಭಯ
ಕರಪುಷ್ಪವ ಎನ್ನ ಶಿರದಲ್ಲಿ ಮುಡಿಸೊ || ೧ ||
ದೃಢಭಕ್ತಿ ನಿನ್ನಲ್ಲಿ ಬೇಡಿ
ನಾ ಅಡಿಗೆರಗುವೆನಯ್ಯ ಅನುದಿನ ಪಾಡಿ
ಕಡೆಗಣ್ಣಲೇ ಎನ್ನ ನೋಡಿ ಬಿಡುವೆ
ಕೊಡು ನಿನ್ನ ಧ್ಯಾನವ ಮನಶುಚಿ ಮಾಡಿ || ೨ ||
ಮೊರೆಹೊಕ್ಕವರ ಕಾಯ್ವ ಬಿರುದು
ಎನ್ನ ಮರೆಯದೆ ರಕ್ಷಣೆ ಮಾಡಯ್ಯ ಪೊರೆದು
ದುರಿತಗಳೆಲ್ಲವ ತರಿದು
ಸಿರಿ ಪುರಂದರವಿಠ್ಠಲ ಎನ್ನನು ಪೊರೆದು || ೩ ||