ದುಗ್ಗಾಣಿ ಎಂಬೊದು
ರಚನೆಕಾರ: ಪುರಂದರದಾಸರು
ವರ್ಗ: ಉಪದೇಶಾತ್ಮಕ
ದುಗ್ಗಾಣಿ ಎಂಬೊದು ದುರ್ಜನ ಸಂಘ
ದುಗ್ಗಾಣಿ ಬಲು ಕೆಟ್ಟದಣ್ಣ || ಪ ||
ಆಚಾರ ಹೇಳೋದು ದುಗ್ಗಾಣಿ
ಬಲು ನೀಚರ ಮಾಡೋದು ದುಗ್ಗಾಣಿ
ನಾಚಿಕೆಯಿಲ್ಲದೆ ಮನೆ ಮನೆ ತಿರುಗಿ
ಛೀ ಛೀ ಎನಿಸೋದು ದುಗ್ಗಾಣಿಯಣ್ಣ || ೧ ||
ನೆಂಟತನ ಹೇಳೋದು ದುಗ್ಗಾಣಿ
ಬಹು ನೆಂಟರನೊಲಿಸುವುದು ದುಗ್ಗಾಣಿ
ಒಂಟೆ ಹಾಂಗೆ ಮೋರೆ ಮೇಲಕ್ಕೆ ಸೆಳಕೊಂಡು
ಕುಂಟನೆನಿಸೋದು ದುಗ್ಗಾಣಿಯಣ್ಣ || ೨ ||
ಮಾನವ ಹೇಳೋದು ದುಗ್ಗಾಣಿ
ಮಾನ ಹದೆಗೆಡಿಸೋದು ದುಗ್ಗಾಣಿ
ಬಹುಮಾನ ನಿಧಿ ಶ್ರೀ ಪುರಂದರ ವಿಠ್ಠಲನ
ಕಾಣಿಸದಿರುವುದು ದುಗ್ಗಾಣಿಯಣ್ಣ || ೩ ||
ದುಗ್ಗಾಣಿ ಬಲು ಕೆಟ್ಟದಣ್ಣ || ಪ ||
ಆಚಾರ ಹೇಳೋದು ದುಗ್ಗಾಣಿ
ಬಲು ನೀಚರ ಮಾಡೋದು ದುಗ್ಗಾಣಿ
ನಾಚಿಕೆಯಿಲ್ಲದೆ ಮನೆ ಮನೆ ತಿರುಗಿ
ಛೀ ಛೀ ಎನಿಸೋದು ದುಗ್ಗಾಣಿಯಣ್ಣ || ೧ ||
ನೆಂಟತನ ಹೇಳೋದು ದುಗ್ಗಾಣಿ
ಬಹು ನೆಂಟರನೊಲಿಸುವುದು ದುಗ್ಗಾಣಿ
ಒಂಟೆ ಹಾಂಗೆ ಮೋರೆ ಮೇಲಕ್ಕೆ ಸೆಳಕೊಂಡು
ಕುಂಟನೆನಿಸೋದು ದುಗ್ಗಾಣಿಯಣ್ಣ || ೨ ||
ಮಾನವ ಹೇಳೋದು ದುಗ್ಗಾಣಿ
ಮಾನ ಹದೆಗೆಡಿಸೋದು ದುಗ್ಗಾಣಿ
ಬಹುಮಾನ ನಿಧಿ ಶ್ರೀ ಪುರಂದರ ವಿಠ್ಠಲನ
ಕಾಣಿಸದಿರುವುದು ದುಗ್ಗಾಣಿಯಣ್ಣ || ೩ ||