ಎಲ್ಯಾಡಿ ಬಂದ್ಯೋ ನೀ ಹೇಳಯ್ಯ
ರಚನೆಕಾರ: ಶ್ರೀಪಾದರಾಜರು
ವರ್ಗ: ಶ್ರೀಕೃಷ್ಣ
ಎಲ್ಯಾಡಿ ಬಂದ್ಯೋ ನೀ ಹೇಳಯ್ಯ
ನಿಲ್ಲು ನಿಲ್ಲು ಗೋಪಾಲ ಕೃಷ್ಣಯ್ಯ || ಪ ||
ನೊಸಲಲ್ಲಿ ಕಿರುಬೆವರಿಟ್ಟಿದೆ ಅಲ್ಲಿ
ಹೊಸಪರಿ ಸುದ್ದಿಯು ಹುಟ್ಟಿದೆ
ಪುಸಿಯಲ್ಲ ಈ ಮಾತು ನಿನ್ನ
ನಸುನಗೆ ಕೀರ್ತಿ ಹೆಚ್ಚಿದೆ || ೧ ||
ಬೆರಳ ಉಂಗುರವೆಲ್ಲಿ ಹೋಗಿದೆ ನಿನ್ನ
ಕೊರಳ ಪದಕವೆಲ್ಲಿ ನೀಗಿದೆ
ಸರಕೆಲ್ಲ ಅವಳಲ್ಲಿ ಸಾಗಿದೆ ಆ
ತರುಣಿ ಮಹಿಮೆ ಹೀಂಗಾಗಿದೆ || ೨ ||
ಕಳ್ಳತನವ ಹೀಗೆ ಮಾಡಿದೆ ನಿನ್ನ
ಸುಳ್ಳು ಕಡೆಗೆ ನಾ ನೋಡಿದೆ
ಎಲ್ಲರಿಗೂ ಠಕ್ಕು ಮಾಡಿದೆ
ಚಲುವ ರಂಗವಿಠಲ ನಗೆಗೀಡಾದೆ || ೩ ||
ನಿಲ್ಲು ನಿಲ್ಲು ಗೋಪಾಲ ಕೃಷ್ಣಯ್ಯ || ಪ ||
ನೊಸಲಲ್ಲಿ ಕಿರುಬೆವರಿಟ್ಟಿದೆ ಅಲ್ಲಿ
ಹೊಸಪರಿ ಸುದ್ದಿಯು ಹುಟ್ಟಿದೆ
ಪುಸಿಯಲ್ಲ ಈ ಮಾತು ನಿನ್ನ
ನಸುನಗೆ ಕೀರ್ತಿ ಹೆಚ್ಚಿದೆ || ೧ ||
ಬೆರಳ ಉಂಗುರವೆಲ್ಲಿ ಹೋಗಿದೆ ನಿನ್ನ
ಕೊರಳ ಪದಕವೆಲ್ಲಿ ನೀಗಿದೆ
ಸರಕೆಲ್ಲ ಅವಳಲ್ಲಿ ಸಾಗಿದೆ ಆ
ತರುಣಿ ಮಹಿಮೆ ಹೀಂಗಾಗಿದೆ || ೨ ||
ಕಳ್ಳತನವ ಹೀಗೆ ಮಾಡಿದೆ ನಿನ್ನ
ಸುಳ್ಳು ಕಡೆಗೆ ನಾ ನೋಡಿದೆ
ಎಲ್ಲರಿಗೂ ಠಕ್ಕು ಮಾಡಿದೆ
ಚಲುವ ರಂಗವಿಠಲ ನಗೆಗೀಡಾದೆ || ೩ ||