ಗುರುವಿನ ಗುಲಾಮನಾಗುವ ತನಕ
ರಚನೆಕಾರ: ಪುರಂದರದಾಸರು
ವರ್ಗ: ಉಪದೇಶಾತ್ಮಕ
ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ || ಪ ||
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ || ಅ.ಪ ||
ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ || ೧ ||
ಕೊರಳೊಳು ಮಾಲೆ ಧರಿಸಿದರಿಲ್ಲ
ಬೆರಳೊಳು ಜಪಮಣಿ ಎಣಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ || ೨ ||
ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ || ೩ ||
ದೊರೆಯದಣ್ಣ ಮುಕುತಿ || ಪ ||
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ || ಅ.ಪ ||
ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ || ೧ ||
ಕೊರಳೊಳು ಮಾಲೆ ಧರಿಸಿದರಿಲ್ಲ
ಬೆರಳೊಳು ಜಪಮಣಿ ಎಣಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ || ೨ ||
ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ || ೩ ||