ಹಣವೇ ನಿನ್ನಯ ಗುಣವೇನು
ರಚನೆಕಾರ: ವಾದಿರಾಜ ತೀರ್ಥರು
ವರ್ಗ: ಉಪದೇಶಾತ್ಮಕ
ಹಣವೇ ನಿನ್ನಯ ಗುಣವೇನು ಬಣ್ಣಿಪೆನೊ || ಪ ||
ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯ || ಅ.ಪ ||
ಬೆಲೆಯಾಗದವನೆಲ್ಲ ಬೆಲೆಯ ಮಾಡಿಸುವಿ
ಎಲ್ಲ ವಸ್ತುಗಳನಿದ್ದಲ್ಲೆ ತರಿಸುವಿ
ಕುಲಗೆಟ್ಟವರ ಸತ್ಕುಲಕೆ ಸೇರಿಸುವಿ
ಹೊಲೆಯನಾದರೂ ತಂದೊಳಗಿರಿಸುವಿ || ೧ ||
ಅಂಗನೆಯರ ಸಂಗ ಅತಿಶಯದಿ ಮಾಡಿಸುವಿ
ಶೃಂಗಾರಾಭರಣಂಗಳ ಬೇಗ ತರಿಸುವಿ
ಮಂಗನಾದರೂ ಅನಂಗನೆಂದೆನಿಸುವಿ
ಕಂಗಳಿಲ್ಲದವಗೆ ಮಗಳ ಕೊಡಿಸುವಿ || ೨ ||
ಚರಣಕ್ಕೆ ಬಂದಂಥ ದುರಿತವನು ಬಿಡಿಸುವಿ
ಸರುವರಿಗೆ ಶ್ರೇಷ್ಠನರನ ಮಾಡಿಸುವಿ
ಅರಿಯದ ಶುಂಠನ ಅರಿತವನೆನಿಸುವಿ
ಸಿರಿಹಯವದನನ ಸ್ಮರಣೆ ಮರೆಸುವಿ || ೩ ||
ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯ || ಅ.ಪ ||
ಬೆಲೆಯಾಗದವನೆಲ್ಲ ಬೆಲೆಯ ಮಾಡಿಸುವಿ
ಎಲ್ಲ ವಸ್ತುಗಳನಿದ್ದಲ್ಲೆ ತರಿಸುವಿ
ಕುಲಗೆಟ್ಟವರ ಸತ್ಕುಲಕೆ ಸೇರಿಸುವಿ
ಹೊಲೆಯನಾದರೂ ತಂದೊಳಗಿರಿಸುವಿ || ೧ ||
ಅಂಗನೆಯರ ಸಂಗ ಅತಿಶಯದಿ ಮಾಡಿಸುವಿ
ಶೃಂಗಾರಾಭರಣಂಗಳ ಬೇಗ ತರಿಸುವಿ
ಮಂಗನಾದರೂ ಅನಂಗನೆಂದೆನಿಸುವಿ
ಕಂಗಳಿಲ್ಲದವಗೆ ಮಗಳ ಕೊಡಿಸುವಿ || ೨ ||
ಚರಣಕ್ಕೆ ಬಂದಂಥ ದುರಿತವನು ಬಿಡಿಸುವಿ
ಸರುವರಿಗೆ ಶ್ರೇಷ್ಠನರನ ಮಾಡಿಸುವಿ
ಅರಿಯದ ಶುಂಠನ ಅರಿತವನೆನಿಸುವಿ
ಸಿರಿಹಯವದನನ ಸ್ಮರಣೆ ಮರೆಸುವಿ || ೩ ||