ಹಣ್ಣು ಕೊಂಬುವ ಬನ್ನಿರಿ
ರಚನೆಕಾರ: ಕನಕದಾಸರು
ವರ್ಗ: ಶ್ರೀಕೃಷ್ಣ
ಹಣ್ಣು ಕೊಂಬುವ ಬನ್ನಿರಿ ಹರಿದಾಸರು
ಹಣ್ಣು ಕೊಂಬುವ ಬನ್ನಿರಿ || ಪ ||
ಚೆನ್ನ ಬಾಲಕೃಷ್ಣನೆಂಬ
ಕನ್ನೆಗೊನೆ ಬಾಳೆಹಣ್ಣು || ಅ.ಪ ||
ಸುತ್ತೇಳು ಲೋಕದಿ ಸುರರು ಬಿತ್ತಿದ ಹಣ್ಣು
ಭಕ್ತರ ಬಾಯೊಳು ನೆನೆವ ಹಣ್ಣು
ಆರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆ
ನಿತ್ಯ ಮಾಧವನೆಂಬ ಅಚ್ಚಮಾವಿನ ಹಣ್ಣು || ೧ ||
ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣು
ನಿಜಮುನಿಗಳಿಗೆ ತೋರಿಸಿದ ಹಣ್ಣು
ತ್ರಿಜಗವಂದಿತ ಪಾಲ್ಗಡಲೊಡೆಯನೆ ಹಣ್ಣು
ಸುಜನಭಕ್ತರೆಲ್ಲ ಕೊಳ್ಳಬನ್ನಿರಿ ಹಣ್ಣು || ೨ ||
ತುರುವ ಕಾಯ್ದ ಹಣ್ಣು ತುರಗನ ತುಳಿದಾ ಹಣ್ಣು
ಕರೆದರೆ ಕಂಬದೊಳು ಓಯೆಂಬ ಹಣ್ಣು
ಮರುಗುವ ಧ್ರುವನಿಗೆ ಪಟ್ಟಗಟ್ಟಿದ ಹಣ್ಣು
ಕರುಣಾಳು ಕಾಗಿನೆಲೆಯಾದಿಕೇಶವ ಹಣ್ಣು || ೩ ||
ಹಣ್ಣು ಕೊಂಬುವ ಬನ್ನಿರಿ || ಪ ||
ಚೆನ್ನ ಬಾಲಕೃಷ್ಣನೆಂಬ
ಕನ್ನೆಗೊನೆ ಬಾಳೆಹಣ್ಣು || ಅ.ಪ ||
ಸುತ್ತೇಳು ಲೋಕದಿ ಸುರರು ಬಿತ್ತಿದ ಹಣ್ಣು
ಭಕ್ತರ ಬಾಯೊಳು ನೆನೆವ ಹಣ್ಣು
ಆರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆ
ನಿತ್ಯ ಮಾಧವನೆಂಬ ಅಚ್ಚಮಾವಿನ ಹಣ್ಣು || ೧ ||
ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣು
ನಿಜಮುನಿಗಳಿಗೆ ತೋರಿಸಿದ ಹಣ್ಣು
ತ್ರಿಜಗವಂದಿತ ಪಾಲ್ಗಡಲೊಡೆಯನೆ ಹಣ್ಣು
ಸುಜನಭಕ್ತರೆಲ್ಲ ಕೊಳ್ಳಬನ್ನಿರಿ ಹಣ್ಣು || ೨ ||
ತುರುವ ಕಾಯ್ದ ಹಣ್ಣು ತುರಗನ ತುಳಿದಾ ಹಣ್ಣು
ಕರೆದರೆ ಕಂಬದೊಳು ಓಯೆಂಬ ಹಣ್ಣು
ಮರುಗುವ ಧ್ರುವನಿಗೆ ಪಟ್ಟಗಟ್ಟಿದ ಹಣ್ಣು
ಕರುಣಾಳು ಕಾಗಿನೆಲೆಯಾದಿಕೇಶವ ಹಣ್ಣು || ೩ ||