ಹೆತ್ತ ತಾಯಿಗಿಂತ

ರಚನೆಕಾರ: ಕನಕದಾಸರು

ವರ್ಗ: ಉಪದೇಶಾತ್ಮಕ

ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ
ಉತ್ತಮ ಅಶ್ವವ ಕತ್ತೆ ಹೋಲುವುದುಂಟೆ || ಪ ||

ವಿತ್ತವುಳ್ಳವನ ಕುಲ ಎಣಿಸುವುದುಂಟೆ
ಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ || ೧ ||

ಅತ್ತೆಮನೆ ಸೇರುವಗೆ ಅಭಿಮಾನವುಂಟೆ
ಬತ್ತಲೆ ತಿರುಗುವಗೆ ಭಯವು ಇನ್ನುಂಟೆ || ೨ ||

ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆ
ಮರ್ತ್ಯದೊಳನ್ಯ ದೇವರು ಸರಿಯುಂಟೆ || ೩ ||