ಇದನಾದರು ಕೊಡದಿದ್ದರೆ
ರಚನೆಕಾರ: ಶ್ರೀಪಾದರಾಜರು
ವರ್ಗ: ಉಪದೇಶಾತ್ಮಕ
ಇದನಾದರು ಕೊಡದಿದ್ದರೆ ನಿನ್ನ
ಪದಕಮಲವ ನಂಬಿ ಭಜಿಸುವದೆಂತೊ || ಪ ||
ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನ
ಬೇಸರಿಸಿ ಬೇಡ ಬಂದುದಿಲ್ಲ
ವಾಸುದೇವನೆ ನಿನ್ನ ದಾಸರ ದಾಸರ
ದಾಸರ ದಾಸ್ಯವ ಕೊಡು ಸಾಕೆಂದರೆ || ೧ ||
ಸತಿಸುತರುಗಳ ಸಹಿತನಾಗಿ ನಾ
ಹಿತದಿಂದ ಇರಬೇಕೆಂಬೊದಿಲ್ಲ
ಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನ
ಕಥಾಮೃತವನೆ ಕೊಡು ಸಾಕೆಂದರೆ || ೨ ||
ಸಾಲವಾಯಿತು, ಸಂಬಳ ಎನಗೆ
ಸಾಲದೆಂದು ಬೇಡ ಬಂದುದಿಲ್ಲ
ನಾಲಗೆಯಲಿ ನಿನ್ನ ನಾಮದುಚ್ಚರಣೆಯ
ಪಾಲಿಸಬೇಕೆಂದು ಬೇಡಿದೆನಲ್ಲದೆ || ೩ ||
ಒಡವೆ ಒಡ್ಯಾಣಗಳಿಲ್ಲೆಂದು
ಬಡವನೆಂದು ಬೇಡ ಬಂದುದಿಲ್ಲ
ಒಡೆಯ ನಿನ್ನಡಿಗಳಿಗೆರಗುವುದಕೆ ಮನ
ಬಿಡದಿಹದೊಂದನು ಕೊಡು ಸಾಕೆಂದರೆ || ೪ ||
ಆಗಬೇಕು ರಾಜ್ಯಭೋಗಗಳೆನಗೆಂದು
ಈಗ ನಾನು ಬೇಡ ಬಂದುದಿಲ್ಲ
ನಾಗಶಯನ ರಂಗವಿಠಲ ನಾ ನಿನ್ನ
ಬಾಗಿಲ ಕಾಯುವ ಭಾಗ್ಯ ಸಾಕೆಂದರೆ || ೫ ||
ಪದಕಮಲವ ನಂಬಿ ಭಜಿಸುವದೆಂತೊ || ಪ ||
ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನ
ಬೇಸರಿಸಿ ಬೇಡ ಬಂದುದಿಲ್ಲ
ವಾಸುದೇವನೆ ನಿನ್ನ ದಾಸರ ದಾಸರ
ದಾಸರ ದಾಸ್ಯವ ಕೊಡು ಸಾಕೆಂದರೆ || ೧ ||
ಸತಿಸುತರುಗಳ ಸಹಿತನಾಗಿ ನಾ
ಹಿತದಿಂದ ಇರಬೇಕೆಂಬೊದಿಲ್ಲ
ಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನ
ಕಥಾಮೃತವನೆ ಕೊಡು ಸಾಕೆಂದರೆ || ೨ ||
ಸಾಲವಾಯಿತು, ಸಂಬಳ ಎನಗೆ
ಸಾಲದೆಂದು ಬೇಡ ಬಂದುದಿಲ್ಲ
ನಾಲಗೆಯಲಿ ನಿನ್ನ ನಾಮದುಚ್ಚರಣೆಯ
ಪಾಲಿಸಬೇಕೆಂದು ಬೇಡಿದೆನಲ್ಲದೆ || ೩ ||
ಒಡವೆ ಒಡ್ಯಾಣಗಳಿಲ್ಲೆಂದು
ಬಡವನೆಂದು ಬೇಡ ಬಂದುದಿಲ್ಲ
ಒಡೆಯ ನಿನ್ನಡಿಗಳಿಗೆರಗುವುದಕೆ ಮನ
ಬಿಡದಿಹದೊಂದನು ಕೊಡು ಸಾಕೆಂದರೆ || ೪ ||
ಆಗಬೇಕು ರಾಜ್ಯಭೋಗಗಳೆನಗೆಂದು
ಈಗ ನಾನು ಬೇಡ ಬಂದುದಿಲ್ಲ
ನಾಗಶಯನ ರಂಗವಿಠಲ ನಾ ನಿನ್ನ
ಬಾಗಿಲ ಕಾಯುವ ಭಾಗ್ಯ ಸಾಕೆಂದರೆ || ೫ ||