ಇಕ್ಕೋ ನೋಡೆ ರಂಗನಾಥನ
ರಚನೆಕಾರ: ಶ್ರೀಪಾದರಾಜರು
ವರ್ಗ: ವಿಷ್ಣು
ಇಕ್ಕೋ ನೋಡೆ ರಂಗನಾಥನ ಚಿಕ್ಕಪಾದವ || ಪ ||
ಸಿಕ್ಕಿತೆ ಶ್ರೀ ಲಕ್ಷ್ಮೀಪತಿಯ ದಿವ್ಯಪಾದವ || ಅ.ಪ. ||
ಶಂಖ ಚಕ್ರ ಗದಾ ಪದ್ಮ ಅಂಕಿತ ಪಾದವ
ಅಂಕುಶ ಕುಲಿಶ ಧ್ವಜರೇಖಾ ಅಂಕಿತ ಪಾದವ
ಪಂಕಜಾಸನನ ಹೃದಯದಲ್ಲಿ ನಲಿಯುವ ಪಾದವ
ಸಂಕಟಹರಣ ವೆಂಕಟೇಶನ ದಿವ್ಯ ಪಾದವ || ೧ ||
ಲಲನೆ ಲಕ್ಷ್ಮಿಯಂಕದಲ್ಲಿ ನಲಿಯುವ ಪಾದವ
ಜಲಜಾಸನನ ಅಭೀಷ್ಟವೆಲ್ಲ ಸಲಿಸುವ ಪಾದವ
ಮಲ್ಲರ ಗೆಲಿದು ಕಂಸಾಸುರನ ಕೊಂದ ಪಾದವ
ಬಲಿಯ ಮೆಟ್ಟಿ ಭಾಗೀರಥಿಯ ಪಡೆದ ಪಾದವ || ೨ ||
ಬಂಡೆಯ ಬಾಲೆಯ ಮಾಡಿದ ಉದ್ದಂಡ ಪಾದವ
ಬಂಡಿಲಿದ್ದ ಶಕಟಾಸುರನ ಒದ್ದ ಪಾದವ
ಅಂಡಜ ಹನುಮರ ಭುಜದೊಳೊಪ್ಪುವ ಪಾದವ
ಕಂಡೆವೆ ಶ್ರೀರಂಗವಿಠಲನ ದಿವ್ಯಪಾದವ || ೩ ||
ಸಿಕ್ಕಿತೆ ಶ್ರೀ ಲಕ್ಷ್ಮೀಪತಿಯ ದಿವ್ಯಪಾದವ || ಅ.ಪ. ||
ಶಂಖ ಚಕ್ರ ಗದಾ ಪದ್ಮ ಅಂಕಿತ ಪಾದವ
ಅಂಕುಶ ಕುಲಿಶ ಧ್ವಜರೇಖಾ ಅಂಕಿತ ಪಾದವ
ಪಂಕಜಾಸನನ ಹೃದಯದಲ್ಲಿ ನಲಿಯುವ ಪಾದವ
ಸಂಕಟಹರಣ ವೆಂಕಟೇಶನ ದಿವ್ಯ ಪಾದವ || ೧ ||
ಲಲನೆ ಲಕ್ಷ್ಮಿಯಂಕದಲ್ಲಿ ನಲಿಯುವ ಪಾದವ
ಜಲಜಾಸನನ ಅಭೀಷ್ಟವೆಲ್ಲ ಸಲಿಸುವ ಪಾದವ
ಮಲ್ಲರ ಗೆಲಿದು ಕಂಸಾಸುರನ ಕೊಂದ ಪಾದವ
ಬಲಿಯ ಮೆಟ್ಟಿ ಭಾಗೀರಥಿಯ ಪಡೆದ ಪಾದವ || ೨ ||
ಬಂಡೆಯ ಬಾಲೆಯ ಮಾಡಿದ ಉದ್ದಂಡ ಪಾದವ
ಬಂಡಿಲಿದ್ದ ಶಕಟಾಸುರನ ಒದ್ದ ಪಾದವ
ಅಂಡಜ ಹನುಮರ ಭುಜದೊಳೊಪ್ಪುವ ಪಾದವ
ಕಂಡೆವೆ ಶ್ರೀರಂಗವಿಠಲನ ದಿವ್ಯಪಾದವ || ೩ ||