ಕಾಗದ ಬಂದಿದೆ ನಮ್ಮ ಕಮಲನಾಭನದು
ರಚನೆಕಾರ: ಪುರಂದರದಾಸರು
ವರ್ಗ: ವಿಷ್ಣು
ಕಾಗದ ಬಂದಿದೆ ನಮ್ಮ ಕಮಲನಾಭನದು, ಈ
ಕಾಗದವನ್ನು ಓದಿಕೊಂಡು ಕಾಲವ ಕಳೆಯಿರೊ || ಪ ||
ಕಾಮಕ್ರೋಧವ ಬಿಡಿರೆಂಬೊ ಕಾಗದ ಬಂದಿದೆ
ನೇಮನಿಷ್ಠೆಯೊಳಿರೆಂಬೊ ಕಾಗದ ಬಂದಿದೆ
ತಾಮಸ ಜನರನ್ನು ಕೂಡದಿರೆಂಬೊ ಕಾಗದ ಬಂದಿದೆ, ನಮ್ಮ
ಕಾಮನಯ್ಯನು ತಾನೆ ಬರೆದ ಕಾಗದ ಬಂದಿದೆ || ೧ ||
ಹೆಣ್ಣಿನಾಸೆ ಬಿಡಿರೆಂಬೊ ಕಾಗದ ಬಂದಿದೆ
ಹೊನ್ನಿನಾಸೆ ಬಿಡಿರೆಂಬೊ ಕಾಗದ ಬಂದಿದೆ
ಮಣ್ಣಿನಾಸೆ ಬಿಡಿರೆಂಬೊ ಕಾಗದ ಬಂದಿದೆ, ನಮ್ಮ
ಕಮಲನಾಭನು ತಾನೆ ಬರೆದ ಕಾಗದ ಬಂದಿದೆ || ೨ ||
ಗೆಜ್ಜೆ ಕಾಲ್ಕಟ್ಟಿರೆಂಬೊ ಕಾಗದ ಬಂದಿದೆ
ಹೆಜ್ಜೆ ಹೆಜ್ಜೆಗೆ ಹರಿಯೆನ್ನಿರೆಂಬೊ ಕಾಗದ ಬಂದಿದೆ
ಲಜ್ಜೆ ಬಿಟ್ಟು ಕುಣಿಯಿರೆಂಬೊ ಕಾಗದ ಬಂದಿದೆ, ನಮ್ಮ
ಪುರಂದರವಿಠಲ ತಾನೆ ಬರೆದ ಕಾಗದ ಬಂದಿದೆ || ೩ ||