ಕಲ್ಲು ಸಕ್ಕರೆ ಕೊಳ್ಳಿರೊ
ರಚನೆಕಾರ: ಪುರಂದರದಾಸರು
ವರ್ಗ: ಶ್ರೀಕೃಷ್ಣ
ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು
ಕಲ್ಲು ಸಕ್ಕರೆ ಕೊಳ್ಳಿರೊ || ಪ ||
ಕಲ್ಲು ಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀಕೃಷ್ಣ ನಾಮವೆಂಬ || ಅ.ಪ ||
ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳ್ ತುಂಬುವುದಲ್ಲ
ಎತ್ತ ಹೋದರೂ ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ತರುವಂಥ || ೧ ||
ಸಂತೆ ಕಂತೆಗೆ ಹೋಗಿ ಶ್ರಮ ಪಡಿಸುವುದಲ್ಲ
ಸಂತೆಯೊಳಗೆ ಇದು ಮಾರುವುದಲ್ಲ
ಸಂತತ ಭಕ್ತರ ನಾಲಿಗೆ ಸವಿಗೊಂಬ
ಕಾಂತ ಪುರಂದರ ವಿಠ್ಠಲ ನಾಮವೆಂಬ || ೨ ||
ಕಲ್ಲು ಸಕ್ಕರೆ ಕೊಳ್ಳಿರೊ || ಪ ||
ಕಲ್ಲು ಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀಕೃಷ್ಣ ನಾಮವೆಂಬ || ಅ.ಪ ||
ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳ್ ತುಂಬುವುದಲ್ಲ
ಎತ್ತ ಹೋದರೂ ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ತರುವಂಥ || ೧ ||
ಸಂತೆ ಕಂತೆಗೆ ಹೋಗಿ ಶ್ರಮ ಪಡಿಸುವುದಲ್ಲ
ಸಂತೆಯೊಳಗೆ ಇದು ಮಾರುವುದಲ್ಲ
ಸಂತತ ಭಕ್ತರ ನಾಲಿಗೆ ಸವಿಗೊಂಬ
ಕಾಂತ ಪುರಂದರ ವಿಠ್ಠಲ ನಾಮವೆಂಬ || ೨ ||