ಲಾಲಿ ಪಾವನ ಚರಣ

ರಚನೆಕಾರ: ಕನಕದಾಸರು

ವರ್ಗ: ಶ್ರೀನಿವಾಸ

ಲಾಲಿ ಪಾವನ ಚರಣ ಲಾಲಿ ಅಘಹರಣ
ಲಾಲಿ ವೆಂಕಟರಮಣ ಲಲಿತ ಕಲ್ಯಾಣ || ಪ ||

ವನಜಾಕ್ಷ ಮಾಧವ ವಸುದೇವ ತನಯ
ಸನಕಾದಿ ಮುನಿವಂದ್ಯ ಸಾಧುಜನಪ್ರಿಯ
ಇನಕೋಟಿಶತತೇಜ ಮುನಿಕಲ್ಪ ಭೂಜ
ಕನಕಾದ್ರಿ ನಿಲಯ ವೆಂಕಟರಾಯ ಜಜೀಯ || ೧ ||

ಜಗದೇಕನಾಯಕ ಜಲಜದಳನೇತ್ರ
ಖಗರಾಜ ವಾಹನ ಕಲ್ಯಾಣ ಚರಿತ
ಸಗರತನಯಾರ್ಚಿತ ಸನಕಾದಿ ವಿನುತ
ರಘುವಂಶಕುತಿಲಕ ರಮಣೀಯಗಾತ್ರ || ೨ ||

ನಂದಗೋಪ ಕುಮಾರ ನವನೀತ ಚೋರ
ಮಂದಾಕಿನೀ ಜನಕ ಮೋಹನಾಕಾರ
ಇಂದುಧರಸತಿ ವಿನುತ ವಿಶ್ವಸಂಚಾರ
ನಂದಗೋವಿಂದ ಮುಚುಕುಂದ ನುತಸಾರ || ೩ ||

ಪಕ್ಷಿವಾಹನ ವಿಷ್ಣು ಪಾಹಿ ಪರಮೇಶ
ರಕ್ಷ ಕೌಸ್ತುಭಭೂಷ ವೈಕುಂಠವಾಸ
ಅಕ್ಷಯ ಫಲದಾಟ ಅಖಿಳ ಲೋಕೇಶ
ಲಕ್ಷಣ ಪರಿಪೂರ್ಣ ಲಕ್ಷ್ಮಿಪ್ರಾಣೇಶ || ೪ ||

ನರಮೃಗಾಕಾರಿ ಹಿರಣ್ಯಕ ವೈರಿ
ಕರಿರಾಜ ರಕ್ಷಕ ಕಾರುಣ್ಯಮೂರ್ತಿ
ಹರಿ ಆದಿಕೇಶವ ಗುರು ಅಪ್ರಮೇಯ
ಶ್ರೀಧರ ಶೇಷಗಿರಿ ವರ ತಿಮ್ಮರಾಯ || ೫ ||