ಮುದ್ದು ರಾಮರ ಬಂಟ

ರಚನೆಕಾರ: ವಾದಿರಾಜ ತೀರ್ಥರು

ವರ್ಗ: ಹನುಮಂತ

ಮುದ್ದು ರಾಮರ ಬಂಟ
ಬುದ್ಧಿಯುಳ್ಳ ಹನುಮಂತ
ಹದ್ದಾಗಿ ಹಾರಿದನೆ ಆಕಾಶಕೆ || ಪ ||

ನಿದ್ರೆ ಗೈವ ಸಮಯದಿ ಎದ್ದು ಬಾರೆಂದರೆ
ಅಲ್ಲಿದ್ದ ರಕ್ಕಸರನೆಲ್ಲಾ ಗೆಲಿದಾತನೆ || ಅ.ಪ ||

ದಾರಿ ದೂರವೆಂದು ದಾರಿಯನೆ ನಿರ್ಮಿಸಿದ
ಧೀರ ರಾಮರ ಬಂಟ ಹನುಮಂತನೆ |
ನೋಡಿಬಾರೆಂದರೆ ಪೋಗಿ ಲಂಕೆಯ ಸುಟ್ಟು
ಬೇಗದಲಿ ಮರವನೇರಿ ಕುಳಿತಾತನೆ || ೧ ||

ಅಶೋಕ ವನದಲ್ಲಿ ಸೀತೆಯನು ನೋಡಿದ
ಶ್ರೀರಾಮರ ಬಂಟ ಹನುಮಂತನೆ |
ಮಾತೆಯನು ಮಾತಾಡಿಸಿ ಕ್ಷೇಮ ಸುದ್ದಿ
ತಿಳಿಸಿದ ರಘುವೀರ ದೂತ ಜಾಣ ನಿವನೆ || ೨ ||

ಆತನ ಮಾತಿಗೆ ಸೇತುವೆನೆ ಕಟ್ಟಿಸಿದ
ಸೀತಾರಾಮರ ಬಂಟ ಹನುಮಂತನೆ |
ಸೀತಾದೇವಿ ಅಮ್ಮನಿಗೆ ಪ್ರೀತಿಯ ಬಂಟನಾದ
ಮುಖ್ಯಪ್ರಾಣ ಹಯವದನನ ದೂತನೆ || ೩ ||