ನಾ ನಿನಗೇನೂ ಬೇಡುವದಿಲ್ಲ
ರಚನೆಕಾರ: ಶ್ರೀಪಾದರಾಜರು
ವರ್ಗ: ಉಪದೇಶಾತ್ಮಕ
ನಾ ನಿನಗೇನೂ ಬೇಡುವದಿಲ್ಲ, ಎನ್ನ
ಹೃದಯಕಮಲದೊಳು ನಿಂದಿರೊ ಹರಿಯೆ || ಪ ||
ಶಿರ ನಿನ್ನ ಚರಣದಲ್ಲೆರಗಲಿ, ಎನ್ನ
ಚಕ್ಷುಗಳು ನಿನ್ನ ನೋಡಲಿ ಹರಿಯೆ
ಕರ್ಣ ಗೀತಂಗಳ ಕೇಳಲಿ, ಎನ್ನ
ನಾಸಿಕ ನಿರ್ಮಾಲ್ಯ ಘ್ರಾಣಿಸಲಿ ಹರಿಯೆ || ೧ ||
ನಾಲಿಗೆ ನಿನ್ನ ಕೊಂಡಾಡಲಿ, ಎನ್ನ
ಕರಗಳೆರಡು ನಿನಗೆ ಮುಗಿಯಲಿ ಹರಿಯೆ
ಪಾದ ತೀರ್ಥಯಾತ್ರೆ ಹೋಗಲಿ, ನಿನ್ನ
ಧ್ಯಾನ ಎನಗೊಂದು ಕೊಡು ಕಂಡ್ಯ ಹರಿಯೆ || ೨ ||
ಬುದ್ಧಿ ನಿನ್ನೊಳು ಕುಣಿದಾಡಲಿ, ಎನ್ನ
ಚಿತ್ತ ನಿನ್ನಲಿ ನಲಿದಾಡಲಿ ಹರಿಯೆ
ಭಕ್ತಜನರ ಸಂಗವು ದೊರಕಲಿ, ರಂಗ-
ವಿಠಲ ನಿನ್ನ ದಯವಾಗಲಿ ಹರಿಯೆ || ೩ ||
ಹೃದಯಕಮಲದೊಳು ನಿಂದಿರೊ ಹರಿಯೆ || ಪ ||
ಶಿರ ನಿನ್ನ ಚರಣದಲ್ಲೆರಗಲಿ, ಎನ್ನ
ಚಕ್ಷುಗಳು ನಿನ್ನ ನೋಡಲಿ ಹರಿಯೆ
ಕರ್ಣ ಗೀತಂಗಳ ಕೇಳಲಿ, ಎನ್ನ
ನಾಸಿಕ ನಿರ್ಮಾಲ್ಯ ಘ್ರಾಣಿಸಲಿ ಹರಿಯೆ || ೧ ||
ನಾಲಿಗೆ ನಿನ್ನ ಕೊಂಡಾಡಲಿ, ಎನ್ನ
ಕರಗಳೆರಡು ನಿನಗೆ ಮುಗಿಯಲಿ ಹರಿಯೆ
ಪಾದ ತೀರ್ಥಯಾತ್ರೆ ಹೋಗಲಿ, ನಿನ್ನ
ಧ್ಯಾನ ಎನಗೊಂದು ಕೊಡು ಕಂಡ್ಯ ಹರಿಯೆ || ೨ ||
ಬುದ್ಧಿ ನಿನ್ನೊಳು ಕುಣಿದಾಡಲಿ, ಎನ್ನ
ಚಿತ್ತ ನಿನ್ನಲಿ ನಲಿದಾಡಲಿ ಹರಿಯೆ
ಭಕ್ತಜನರ ಸಂಗವು ದೊರಕಲಿ, ರಂಗ-
ವಿಠಲ ನಿನ್ನ ದಯವಾಗಲಿ ಹರಿಯೆ || ೩ ||