ಒಂಬತ್ತು ಹೂವಿಗೆ ಒಂದೇ ನಾಳವು
ರಚನೆಕಾರ: ಕನಕದಾಸರು
ವರ್ಗ: ಉಪದೇಶಾತ್ಮಕ
ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ || ಪ ||
ತುಂಬಿ ನಾಳತುದಿ ತುಂಬಿ ಭಾನುಪ್ರಭೆ ಚಂದಮಾಮ || ಅ.ಪ. ||
ಕದರು ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮ
ಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ || ೧ ||
ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮ
ಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ || ೨ ||
ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮ
ತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ || ೩ ||
ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮ
ಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ || ೪ ||
ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮ
ಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ || ೫ ||
ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ
ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ || ೬ ||
ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮ
ಸುಲಭ ಪದವಿದು ನಳಿನಜಾಂಡದೊಳು ಚಂದಮಾಮ || ೭ ||
ಗುರುವಿನ ಮಹಿಮೆ ಗುರುವೆ ತಾ ಬಲ್ಲನು ಚಂದಮಾಮ
ಮೂಢನಾದವನೇನು ಬಲ್ಲನು ಈ ಮಾತು ಚಂದಮಾಮ || ೮ ||
ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮ
ತಿಳಿದವರು ಪೇಳಿರೀ ಹಳೆಗನ್ನಡವ ಚಂದಮಾಮ || ೯ ||