ಪವಮಾನ ಪವಮಾನ ಜಗದ ಪ್ರಾಣ
ರಚನೆಕಾರ: ವಿಜಯ ದಾಸರು
ವರ್ಗ: ಹನುಮಂತ
ಪವಮಾನ ಪವಮಾನ ಜಗದ ಪ್ರಾಣ ಸಂಕರುಷಣ
ಭವಭಯಾರಣ್ಯ ದಹನ || ಪ ||
ಶ್ರವಣವೆ ಮೊದಲಾದ ನವವಿಧ ಭಕುತಿಯ
ತವಕದಿಂದಲಿ ಕೊಡು ಕವಿಗಳ ಪ್ರಿಯ || ಅ.ಪ ||
ಹೇಮ ಕಚ್ಚುಟ ಉಪವೀತ ಧರಿಪ ಮಾರುತ
ಕಾಮಾದಿ ವರ್ಗ ರಹಿತ
ವ್ಯೋಮಾದಿ ಸರ್ವವ್ಯಾಪುತ ಸತತ ನಿರ್ಭೀತ
ರಾಮಚಂದ್ರನ ನಿಜದೂತ
ಯಾಮ ಯಾಮಕೆ ನಿನ್ನಾರಾಧಿಪುದಕೆ
ಕಾಮಿಪೆ ಎನಗಿದು ನೇಮಿಸಿ ಪ್ರತಿದಿನ
ಈ ಮನಸಿಗೆ ಸುಖಸ್ತೋಮವ ತೋರುತ
ಪಾಮರ ಮತಿಯನು ನೀ ಮಾಣಿಪುದು || ೧ ||
ವಜ್ರ ಶರೀರ ಗಂಭೀರ ಮುಕುಟಧರ
ದುರ್ಜನವನ ಕುಠಾರ
ನಿರ್ಜರ ಮಣಿದಯಾ ಪಾರವಾರ ಉದಾರ
ಸಜ್ಜನರಘವ ಪರಿಹಾರ
ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು
ಮೂರ್ಜಗವರಿವಂತೆ ಗರ್ಜನೆ ಮಾಡಿದಿ
ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜ ಪಾದದ ಧೂಳಿ
ಮಾರ್ಜನದಲಿ ಭವ ವರ್ಜಿತನೆನಿಸೊ || ೨ ||
ಪ್ರಾಣ ಅಪಾನ ವ್ಯಾನೋದಾನ ಸಮಾನ
ಆನಂದ ಭಾರತಿ ರಮಣ
ನೀನೆ ಶರ್ವಾದಿ ಗೀರ್ವಾಣಾದ್ಯಮರರಿಗೆ
ಜ್ಞಾನಧನ ಪಾಲಿಪ ವರೇಣ್ಯ
ನಾನು ನಿರುತದಲಿ ಏನೇನೆಸಗಿದೆ
ಮಾನಸಾದಿ ಕರ್ಮ ನಿನಗೊಪ್ಪಿಸಿದೆನೊ
ಪ್ರಾಣನಾಥ ಸಿರಿವಿಜಯವಿಠಲನ
ಕಾಣಿಸಿ ಕೊಡುವದು ಭಾನು ಪ್ರಕಾಶ || ೩ ||
ಭವಭಯಾರಣ್ಯ ದಹನ || ಪ ||
ಶ್ರವಣವೆ ಮೊದಲಾದ ನವವಿಧ ಭಕುತಿಯ
ತವಕದಿಂದಲಿ ಕೊಡು ಕವಿಗಳ ಪ್ರಿಯ || ಅ.ಪ ||
ಹೇಮ ಕಚ್ಚುಟ ಉಪವೀತ ಧರಿಪ ಮಾರುತ
ಕಾಮಾದಿ ವರ್ಗ ರಹಿತ
ವ್ಯೋಮಾದಿ ಸರ್ವವ್ಯಾಪುತ ಸತತ ನಿರ್ಭೀತ
ರಾಮಚಂದ್ರನ ನಿಜದೂತ
ಯಾಮ ಯಾಮಕೆ ನಿನ್ನಾರಾಧಿಪುದಕೆ
ಕಾಮಿಪೆ ಎನಗಿದು ನೇಮಿಸಿ ಪ್ರತಿದಿನ
ಈ ಮನಸಿಗೆ ಸುಖಸ್ತೋಮವ ತೋರುತ
ಪಾಮರ ಮತಿಯನು ನೀ ಮಾಣಿಪುದು || ೧ ||
ವಜ್ರ ಶರೀರ ಗಂಭೀರ ಮುಕುಟಧರ
ದುರ್ಜನವನ ಕುಠಾರ
ನಿರ್ಜರ ಮಣಿದಯಾ ಪಾರವಾರ ಉದಾರ
ಸಜ್ಜನರಘವ ಪರಿಹಾರ
ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು
ಮೂರ್ಜಗವರಿವಂತೆ ಗರ್ಜನೆ ಮಾಡಿದಿ
ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜ ಪಾದದ ಧೂಳಿ
ಮಾರ್ಜನದಲಿ ಭವ ವರ್ಜಿತನೆನಿಸೊ || ೨ ||
ಪ್ರಾಣ ಅಪಾನ ವ್ಯಾನೋದಾನ ಸಮಾನ
ಆನಂದ ಭಾರತಿ ರಮಣ
ನೀನೆ ಶರ್ವಾದಿ ಗೀರ್ವಾಣಾದ್ಯಮರರಿಗೆ
ಜ್ಞಾನಧನ ಪಾಲಿಪ ವರೇಣ್ಯ
ನಾನು ನಿರುತದಲಿ ಏನೇನೆಸಗಿದೆ
ಮಾನಸಾದಿ ಕರ್ಮ ನಿನಗೊಪ್ಪಿಸಿದೆನೊ
ಪ್ರಾಣನಾಥ ಸಿರಿವಿಜಯವಿಠಲನ
ಕಾಣಿಸಿ ಕೊಡುವದು ಭಾನು ಪ್ರಕಾಶ || ೩ ||