ಪಿಳ್ಳಂಗೋವಿಯ ಚೆಲುವ ಕೃಷ್ಣನ
ರಚನೆಕಾರ: ಪುರಂದರದಾಸರು
ವರ್ಗ: ಶ್ರೀಕೃಷ್ಣ
ಪಿಳ್ಳಂಗೋವಿಯ ಚೆಲುವ ಕೃಷ್ಣನ
ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿ || ಪ ||
ಎಲ್ಲಿ ನೋಡಿದರಲ್ಲಿ ತನಿಲ್ಲದಿಲ್ಲವೆಂದು ಬಲ್ಲ ಜಾಣರು || ಅ.ಪ ||
ನಂದಗೋಪನ ಮಂದಿರಗಳ ಸಂದುಗೊಂದಿನಲಿ
ಚಂದ ಚಂದದ ಗೋಪಬಾಲರ ವೃಂದ ವೃಂದದಲಿ
ಸುಂದರಾಂಗದ ಸುಂದರಿಯರ ಹಿಂದು ಮುಂದಿನಲಿ
ಅಂದದಾಕಳ ಕಂದ ಕರುಗಳ ಮಂದೆ ಮಂದೆಯಲಿ || ೧ ||
ಶ್ರೀಗುರುಕ್ತ ಸದಾ ಸುಮಂಗಳ ಯೋಗ ಯೋಗದಲಿ
ಅಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
ಭಾಗವತರು ಸದಾ ಬಾಗಿ ಪಡುವ ರಾಗ ರಾಗದಲಿ || ೨ ||
ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ
ಖೇಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ ಎಂಬ ಭಕ್ತರ ವಾಚಕಂಗಳಲಿ
ವೀಚುಕೊಂಡ ಪುರಂದರವಿಠಲನ ಲೋಚನಾಗ್ರದಲಿ || ೩ ||