ತೊರೆದು ಜೀವಿಸಬಹುದೇ
ರಚನೆಕಾರ: ಕನಕದಾಸರು
ವರ್ಗ: ವಿಷ್ಣು
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ || ಪ ||
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ || ಅ.ಪ ||
ತಾಯಿತಂದೆಯ ಬಿಟ್ಟು ತಪವ ಮಾಡಲುಬಹುದು
ದಾಯಾದಿ ಬಂಧುಗಳ ಬಿಡಲುಬಹುದು
ರಾಯ ತಾ ಮುನಿದರೆ ರಾಜ್ಯವನೆ ಬಿಡಬಹುದು
ಕಾಯಜಪಿತ ನಿನ್ನ ಅಡಿಯ ಬಿಡಲಾಗದು || ೧ ||
ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
ಮಡದಿ ಮಕ್ಕಳ ಕಡೆಗೆ ತೊಲಗಿಸಿಯೇ ಬಿಡಬಹುದು
ಕಡಲೊಡೆಯ ನಿನ್ನಡಿಯ ಘಳಿಗೆ ಬಿಡಲಾಗದು || ೨ ||
ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದು
ಮಾನದಲಿ ಮನವ ತಗ್ಗಿಸಲು ಬಹುದು
ಪ್ರಾಣನಾಯಕಾನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು || ೩ ||
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ || ಅ.ಪ ||
ತಾಯಿತಂದೆಯ ಬಿಟ್ಟು ತಪವ ಮಾಡಲುಬಹುದು
ದಾಯಾದಿ ಬಂಧುಗಳ ಬಿಡಲುಬಹುದು
ರಾಯ ತಾ ಮುನಿದರೆ ರಾಜ್ಯವನೆ ಬಿಡಬಹುದು
ಕಾಯಜಪಿತ ನಿನ್ನ ಅಡಿಯ ಬಿಡಲಾಗದು || ೧ ||
ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
ಮಡದಿ ಮಕ್ಕಳ ಕಡೆಗೆ ತೊಲಗಿಸಿಯೇ ಬಿಡಬಹುದು
ಕಡಲೊಡೆಯ ನಿನ್ನಡಿಯ ಘಳಿಗೆ ಬಿಡಲಾಗದು || ೨ ||
ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದು
ಮಾನದಲಿ ಮನವ ತಗ್ಗಿಸಲು ಬಹುದು
ಪ್ರಾಣನಾಯಕಾನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು || ೩ ||