ಉತ್ತಮರ ಸಂಗ ಎನಗಿತ್ತು
ರಚನೆಕಾರ: ಶ್ರೀಪಾದರಾಜರು
ವರ್ಗ: ಉಪದೇಶಾತ್ಮಕ
ಉತ್ತಮರ ಸಂಗ ಎನಗಿತ್ತು ಸಲಹೊ || ಪ ||
ಚಿತ್ತಜಜನಕ ಸರ್ವೋತ್ತಮ ಮುಕುಂದ || ಅ.ಪ. ||
ತಿರುಗಿ ತಿರುಗಿ ಪುಟ್ಟಲಾರೆ ಪರರ ಬಾಧಿಸಲಾರೆ
ಪರಿಪರಿಯ ಪಾಪಗಳ ಮಾಡಲಾರೆ
ಮರಣ-ಜನನಗಳೆರಡು ಪರಿಹರವ ಮಾಡಯ್ಯ
ಕರುಣಾಸಮುದ್ರ ಮುರವೈರಿ ಶ್ರೀಕೃಷ್ಣ || ೧ ||
ಏನ ಪೇಳಲಿ ದೇವ ನಾ ಮಾಡಿದ ಕರ್ಮ
ನಾನಾ ವಿಚಿತ್ರವೈ ಶ್ರೀನಿವಾಸ
ಹೀನಜನರೊಳಗಾಟ ಶ್ವಾನಾದಿಗಳ ಕೂಟ
ಜ್ಞಾನವಂತನ ಮಾಡೊ ಜಾನಕೀರಮಣ || ೨ ||
ನಿನ್ನ ನಂಬಿದ ಮ್ಯಾಲೆ ಭಯವ್ಯಾತಕೆ
ಪನ್ನಗಾಧಿಪಶಯನ ಮನ್ನಿಸಯ್ಯ
ಮುನ್ನ ಭಕುತರನೆಲ್ಲ ಚೆನ್ನಾಗಿ ಪಾಲಿಸಿದ
ಎನ್ನೊಡೆಯ ರಂಗವಿಠಲ ಎನ್ನ ದೊರೆಯೆ || ೩ ||
ಚಿತ್ತಜಜನಕ ಸರ್ವೋತ್ತಮ ಮುಕುಂದ || ಅ.ಪ. ||
ತಿರುಗಿ ತಿರುಗಿ ಪುಟ್ಟಲಾರೆ ಪರರ ಬಾಧಿಸಲಾರೆ
ಪರಿಪರಿಯ ಪಾಪಗಳ ಮಾಡಲಾರೆ
ಮರಣ-ಜನನಗಳೆರಡು ಪರಿಹರವ ಮಾಡಯ್ಯ
ಕರುಣಾಸಮುದ್ರ ಮುರವೈರಿ ಶ್ರೀಕೃಷ್ಣ || ೧ ||
ಏನ ಪೇಳಲಿ ದೇವ ನಾ ಮಾಡಿದ ಕರ್ಮ
ನಾನಾ ವಿಚಿತ್ರವೈ ಶ್ರೀನಿವಾಸ
ಹೀನಜನರೊಳಗಾಟ ಶ್ವಾನಾದಿಗಳ ಕೂಟ
ಜ್ಞಾನವಂತನ ಮಾಡೊ ಜಾನಕೀರಮಣ || ೨ ||
ನಿನ್ನ ನಂಬಿದ ಮ್ಯಾಲೆ ಭಯವ್ಯಾತಕೆ
ಪನ್ನಗಾಧಿಪಶಯನ ಮನ್ನಿಸಯ್ಯ
ಮುನ್ನ ಭಕುತರನೆಲ್ಲ ಚೆನ್ನಾಗಿ ಪಾಲಿಸಿದ
ಎನ್ನೊಡೆಯ ರಂಗವಿಠಲ ಎನ್ನ ದೊರೆಯೆ || ೩ ||