ವೆಂಕಟೇಶ ಬೇಡಿಕೊಂಬೆ
ರಚನೆಕಾರ: ಪುರಂದರದಾಸರು
ವರ್ಗ: ಶ್ರೀನಿವಾಸ
ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ
ಬ್ರಹ್ಮಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೋ || ಪ ||
ನಷ್ಟ ಮೊದಲಾದಂಥ ಕಷ್ಟ ಬಿಡಿಸೋ
ನಿನ್ನ ಪಟ್ಟದ ರಾಣಿಗೆ ಹೇಳಿ ಪದವಿ ಕೊಡಿಸೋ
ಇಷ್ಟ ಭಕ್ತಜನರೊಳು ಎನ್ನ ಸೇರಿಸೋ
ಈ ಸೃಷ್ಟಿಯೊಳು ನಿನ್ನ ದಾಸಾನುದಾಸನೆನಿಸೋ || ೧ ||
ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೋ
ಪೊಂಬಟ್ಟಲೊಳಗಿನ ಹಾಲು ಉಚ್ಚಿಷ್ಟ ಹಾಕಿಸೋ
ಗಟ್ಯಾಗಿ ಸಕ್ಕರೆ ತುಪ್ಪ ರೊಟ್ಟಿ ಉಣ್ಣಿಸೋ
ಮುಂದೆ ಹುಟ್ಟಿ ಇಹ ಜನ್ಮಂಗಳ ಎನಗೆ ಬಿಡಿಸೋ || ೨ ||
ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೋ
ಉತ್ಕೃಷ್ಟ ಬಂಗಾರದೊಳು ಎನ್ನ ಸೇರಿಸೋ
ಬೆಟ್ಟಿಗೆ ಉಂಗುರ ಮಾಡಿ ಎನ್ನ ಧರಿಸೋ ಸ್ವಾಮಿ
ದಿಟ್ಟ ಪುರಂದರ ವಿಠಲನೆ ದಯದಿ ಪಾಲಿಸೋ || ೩ ||
ಬ್ರಹ್ಮಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೋ || ಪ ||
ನಷ್ಟ ಮೊದಲಾದಂಥ ಕಷ್ಟ ಬಿಡಿಸೋ
ನಿನ್ನ ಪಟ್ಟದ ರಾಣಿಗೆ ಹೇಳಿ ಪದವಿ ಕೊಡಿಸೋ
ಇಷ್ಟ ಭಕ್ತಜನರೊಳು ಎನ್ನ ಸೇರಿಸೋ
ಈ ಸೃಷ್ಟಿಯೊಳು ನಿನ್ನ ದಾಸಾನುದಾಸನೆನಿಸೋ || ೧ ||
ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೋ
ಪೊಂಬಟ್ಟಲೊಳಗಿನ ಹಾಲು ಉಚ್ಚಿಷ್ಟ ಹಾಕಿಸೋ
ಗಟ್ಯಾಗಿ ಸಕ್ಕರೆ ತುಪ್ಪ ರೊಟ್ಟಿ ಉಣ್ಣಿಸೋ
ಮುಂದೆ ಹುಟ್ಟಿ ಇಹ ಜನ್ಮಂಗಳ ಎನಗೆ ಬಿಡಿಸೋ || ೨ ||
ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೋ
ಉತ್ಕೃಷ್ಟ ಬಂಗಾರದೊಳು ಎನ್ನ ಸೇರಿಸೋ
ಬೆಟ್ಟಿಗೆ ಉಂಗುರ ಮಾಡಿ ಎನ್ನ ಧರಿಸೋ ಸ್ವಾಮಿ
ದಿಟ್ಟ ಪುರಂದರ ವಿಠಲನೆ ದಯದಿ ಪಾಲಿಸೋ || ೩ ||